Index   ವಚನ - 240    Search  
 
ವೇದವನೋದಿದವರು ವಿಧಿಗೊಳಗಾದರಲ್ಲದೆ ದೇವರಿಹ ಠಾವನರಿದಿಪ್ಪುದಿಲ್ಲ. ಶಾಸ್ತ್ರವನೋದಿದವರು ಸಂಶಯಕ್ಕೊಳಗಾದವರಲ್ಲದೆ ಸದ್ಗುರುವನರಿದುದಿಲ್ಲ. ಆಗಮವನೋದಿದವರೆಲ್ಲರು ಆಗುಚೇಗಿಗೆ ಒಳಗಾದರಲ್ಲದೆ ಆದಿ ಅನಾದಿಯಿಂದತ್ತಣ ಶರಣ-ಲಿಂಗ ಸಂಬಂಧವನರಿದುದಿಲ್ಲ. ಪುರಾಣವನೋದಿದವರೆಲ್ಲರು ಪೂರ್ವದ ಬಟ್ಟೆಗೊಳಗಾದವರಲ್ಲದೆ ಪೂರ್ವದ ಕರ್ಮವ ಹರಿದು ಪುರಾತನರನರಿದುದಿಲ್ಲ. ಇಂತಿವರೆಲ್ಲರು ಚರಶೇಷವ ಲಿಂಗಕ್ಕರ್ಪಿಸಲರಿಯರಾಗಿ ಇವರಿಗೆ ಲಿಂಗವು ಕಾಣಿಸದೆಂದಾತ ನಮ್ಮ ಅಂಬಿಗರ ಚೌಡಯ್ಯ.