ಶುಕ್ಲಶೋಣಿತಪಿಂಡೈಕ್ಯನ ಚಿತ್ತವಾಯು ಆರು ದಳದ ಪದ್ಮದಲ್ಲಿಹುದು.
ಮೊಲೆ ಮುಡಿ ಬಂದರೆ ಆ ಪಿಂಡವನು ಹೆಣ್ಣೆಂಬರು.
ಗಡ್ಡ ಮೀಸೆಗಳು ಬಂದರೆ ಆ ಪಿಂಡವನು ಗಂಡೆಂಬರು,
ಆ ಇಬ್ಬರ ನಡುವೆ ಸುಳಿದ ಆತ್ಮನು ಹೆಣ್ಣು ಅಲ್ಲ,
ಗಂಡು ಅಲ್ಲ ನೋಡಾ.
ಇದರಂತುವ ತಿಳಿದು ನೋಡಿಹೆನೆಂದರೆ
ಶ್ರುತಿಗಳಿಗೋಚರೆಂದ ನಮ್ಮ ಅಂಬಿಗರ ಚೌಡಯ್ಯ.