Index   ವಚನ - 264    Search  
 
ಸ್ವಲ್ಪ ಅಮೃತಾನ್ನವನೊಯ್ದು ಹುತ್ತವೆಂದು ಬಿಲದ್ವಾರದಲ್ಲಿ ಹೊಯ್ವ ತೊತ್ತಿಂಗೆಲ್ಲಿಯದೊ ಶಿವಾಚಾರ! ಅದೆಂತೆಂದಡೆ- ಕಲ್ಲನಾಗರ ಕಂಡಡೆ ಹಾಲು ಹೊಯ್ಯೆಂಬಳು, ಬದುಕಿದ ನಾಗರ ಕಂಡಡೆ ಕೊಲ್ಲು ಕೊಲ್ಲೆಂಬಳು. ಉಂಬ ದೇವರು ಬಂದಡೆ ಇಲ್ಲವೆಂದಟ್ಟುವಳು, ಉಣ್ಣದ ಕಲ್ಲುಪ್ರತಿಮೆಯ ಮುಂದಿಟ್ಟು ಉಣ್ಣೆಂಬಳು. ಇಂತಹ ವೇಷದ [ಡಂ]ಬ ತೊತ್ತಿಂಗೆ ವಿಚಾರಿಸದೆ ಲಿಂಗವ ಕೊಡಲಾಗದೆಂದಾತನಂಬಿಗರ ಚೌಡಯ್ಯ.