ಪ್ರಥಮದೀಕ್ಷೆ, ಪರಬ್ರಹ್ಮದೀಕ್ಷೆ,
ಅಂಗಲಿಂಗದೀಕ್ಷೆ, ಪುನರ್ದೀಕ್ಷೆ:
ಇಂತೀ ದೀಕ್ಷೆಗಳಲ್ಲಿ ತಿಳಿಯಬೇಕು.
ಪ್ರಥಮದೀಕ್ಷೆಯ ಮಾಡುವಲ್ಲಿ ಬ್ರಹ್ಮನ ಪಾಶವ ಹರಿಯಬೇಕು.
ಪರಬ್ರಹ್ಮದೀಕ್ಷೆಯ ಮಾಡುವಲ್ಲಿ ವಿಷ್ಣುವಿನ ಪಾಶವ ಹರಿಯಬೇಕು;
ಅಂಗಲಿಂಗದೀಕ್ಷೆಯ ಮಾಡುವಲ್ಲಿ ರುದ್ರನ ಪಾಶವ ಹರಿಯಬೇಕು;
ಪುನರ್ದೀಕ್ಷೆಯ ಮಾಡುವಲ್ಲಿ ಆ ಘಟದಲ್ಲಿದ್ದ ಆತ್ಮನ ಕಳೆದು
ಪುನರಪಿಯ ಮಾಡಿ ಪುನರ್ದೀಕ್ಷೆಯ ಮಾಡಬೇಕು.
ಅದೆಂತೆಂದಡೆ, ಅದಕ್ಕೆ ದೃಷ್ಟ:
ದ್ವಿಜರ ಗರ್ಭದಲ್ಲಿ ಜನಿಸಿದ ಪಿಂಡಕ್ಕೆ
ಮಂತ್ರೋಚ್ಚರಣೆ ಮುಂಜಿಯಿಂದಲ್ಲದೆ ಭೂಸುರಕುಲವಿಲ್ಲ.
ಇದನರಿತು ವಿಚಾರವ ಮಾಡಿ ಕೇಳಿ ಕಂಡು
ಉಪದೇಶ ಗುರುವಾಗಬೇಕು.
ಸದಾಶಿವಮೂರ್ತಿಲಿಂಗವನರಿವುದಕ್ಕೆ.