Index   ವಚನ - 50    Search  
 
ತ್ರಾಸಿನ ನಾಲಗೆಯಂತೆ ಹೆಚ್ಚು ಕುಂದನೊಳಕೊಳ್ಳದೆ, ಗುರುಲಿಂಗಜಂಗಮ ತ್ರಿವಿಧಮುಖವು ಒಂದೆಯೆಂದು ಪ್ರಮಾಳಿಸಿ, ಮಾಡುವ ದ್ರವ್ಯ ಕೇಡಿಲ್ಲದಂತೆ ಮಾಡುವುದು ಸದ್ಭಕ್ತಿಸ್ಥಲ. ಹೀಗಲ್ಲದೆ ಗುರುವಿನ ಆಢ್ಯಕ್ಕಂಜಿ, ಜಂಗಮದ ಸಮೂಹದ ವೆಗ್ಗಳವ ಕಂಡು ಅಂಜಿ ಮಾಡಿದಡೆ, ಭಕ್ತಿಗೂಣೆಯ, ದ್ರವ್ಯದ ಕೇಡು, ಸತ್ಯಕ್ಕೆ ಹೊರಗು, ಸದಾಶಿವಮೂರ್ತಿಲಿಂಗಕ್ಕೆ ದೂರ.