Index   ವಚನ - 69    Search  
 
ಸದ್ಭಕ್ತನ ಆಚರಣೆಯ ಕ್ರೀಯೆಂತುಂಟೆಂದಡೆ: ಜಂಗಮದ ಪಾದೋದಕ ಲಿಂಗಕ್ಕೆ ಮಜ್ಜನವ ಮಾಡುವಲ್ಲಿ ಜಂಗಮದ ಕುಂದು ನಿಂದೆಯ ಕೇಳಬಾರದು. ಜಂಗಮಪ್ರಸಾದವ ಲಿಂಗಕ್ಕೆ ಕೊಡುವಲ್ಲಿ ಅರ್ಥ ಪ್ರಾಣ ಅಭಿಮಾನವ ಮುಟ್ಟಿದಲ್ಲಿ ಚಿತ್ತದಲ್ಲಿ ಹೆಚ್ಚು ಕುಂದು ತೋರಿದಾಗಲೆ ಪ್ರಸಾದಕ್ಕೆ ದೂರ. ಇದು ಕಾರಣ, ದೇಹಭಾವವಳಿದವಂಗಲ್ಲದೆ ಪಾದೋದಕ ಪ್ರಸಾದವಿಲ್ಲಾ ಎಂದೆ. ವಿಶ್ವಾಸವುಂಟಾದಲ್ಲಿ ಕುರುಹಿನ ಮುದ್ರೆಯ ಬಯಕೆ ಉಂಟೆ ಅಯ್ಯಾ? ಅವಿಶ್ವಾಸವುಳ್ಳವಂಗೆ ಗುರುಚರದ ಮಾರ್ಗವಿಲ್ಲಾಯೆಂದೆ. ಸದಾಶಿವಮೂರ್ತಿಲಿಂಗವ ಹೀಗರಿವುದಕ್ಕೆಠಾವ ಕಾಣೆ.