Index   ವಚನ - 409    Search  
 
ಭಿತ್ತಿ ಮೂರರ ಮೇಲೆ ಚಿತ್ರ ಬರೆಯಿತ್ತು; ಪ್ರಥಮ ಭಿತ್ತಿಯ ಚಿತ್ರ ಚಿತ್ರದಂತೆ ಇದ್ದಿತ್ತು; ಎರಡನೆಯ ಭಿತ್ತಿಯ ಚಿತ್ರ ಹೋಗುತ್ತ ಬರುತ್ತ ಇದ್ದಿತ್ತು, ಮೂರನೆಯ ಭಿತ್ತಿಯ ಚಿತ್ರ ಹೋಯಿತ್ತು ಮರಳಿ ಬಾರದು. ಗುಹೇಶ್ವರಾ, ನಿಮ್ಮ ಶರಣ ತ್ರಿವಿಧದಿಂದತ್ತತ್ತಲೆ!