Index   ವಚನ - 213    Search  
 
ಮೊನೆ ತಪ್ಪಿದಲ್ಲಿ ಅಲಗಿನ ಘನವೇನ ಮಾಡುವುದು? ಅರಿವು ಹೀನವಾದಲ್ಲಿ ಕ್ರೀಯ ಹರವರಿಯೇನ ಮಾಡುವುದು? ವರ್ತನ ಶುದ್ದವಿಲ್ಲದೆ ಲಾಂಛನದ ಉತ್ಕೃಷ್ಟವೇನ ಮಾಡುವುದು? ತ್ರಿಕರಣ ಶುದ್ಧವಿಲ್ಲದ ಮಾಟ ದ್ರವ್ಯದ ಕೇಡು, ಭಕ್ತಿಗೆ ಹಾನಿ. ಇಂತೀ ಗುಣಾದಿಗುಣಂಗಳಲ್ಲಿ ಅರಿಯಬೇಕು, ಸದಾಶಿವಮೂರ್ತಿಲಿಂಗವನರಿಯಬೇಕು.