Index   ವಚನ - 265    Search  
 
ಕೆಯಿ ಬೆಳೆವಲ್ಲಿ ಸದೆಗೆ ಮುನಿವರಲ್ಲದೆ ಬೆಳೆಗೆ ಮುನಿದವರುಂಟೆ ಅಯ್ಯಾ? ಅರಿದಂಗವ ತಾಳಿದವರಲ್ಲಿ ಮರವೆಗೆ ಮುನಿವರಲ್ಲದೆ ಅರಿವಿಗೆ ಮುನಿವರುಂಟೆ ಅಯ್ಯಾ? ಕೊಲ್ಲಿ ಆವಿಂಗೆ ಕಾಲ ಕಟ್ಟುವರಲ್ಲದೆ ಮೊಲೆಯ ಕಟ್ಟಿದರುಂಟೆ ಅಯ್ಯಾ? ಗುರುವಾದಡೂ ಆಗಲಿ, ಲಿಂಗವಾದಡೂ ಆಗಲಿ, ಜಂಗಮವಾದಡೂ ಆಗಲಿ, ಅರಿವಿಂಗೆ ಶರಣು ಮರವಿಂಗೆ ಮಥನವ ಮಾಡಿದಲ್ಲದೆ ಇರೆ. ಇದು ನೀವು ಕೊಟ್ಟ ಅರಿವಿನ ಮಾರನ ಇರವು, ಸದಾಶಿವಮೂರ್ತಿಲಿಂಗದ ಬರವು.