Index   ವಚನ - 15    Search  
 
ಒಡೆಯರು ಭಕ್ತರಿಗೆ ಸಲುವ ಸಹಪಂಕ್ತಿಯಲ್ಲಿ, ಗುರು ಅರಸೆಂದು, ತನ್ನ ಪರಿಸ್ಪಂದವೆಂದು ರಸದ್ರವ್ಯವ ಎಸಕದಿಂದ ಇಕ್ಕಿದಡೆ, ಅದು ತಾನರಿದು ಕೊಂಡಡೆ ಕಿಸುಕುಳದ ಪಾಕುಳ. ಅಲ್ಪ ಜಿಹ್ವೆಲಂಪಟಕ್ಕೆ ಸಿಕ್ಕಿ ಸಾವ ಮತ್ಸ್ಯದಂತೆಯಾಗದೆ- ಈ ಗುಣವ ನಿಶ್ಚಯಿಸಿದಲ್ಲಿ ಏಲೇಶ್ವರಲಿಂಗವನರಿಯಬಲ್ಲ.