Index   ವಚನ - 18    Search  
 
ಕ್ರೀಗುಣ ಶುದ್ಧವಾದಲ್ಲಿ ಭಾವಗುಣ ಶುದ್ಧ. ಆ ಸದ್ಭಾವದ ದೆಸೆಯಿಂದ ವಿಮಲಜ್ಞಾನ. ಆ ಸುಜ್ಞಾನ ಸೂತ್ರವಾಗಿ ತ್ರಿವಿಧಭೇದವಾಯಿತ್ತು. ಆ ತ್ರಿವಿಧದ ಸೂತ್ರದಿಂದ ಷಡುಸ್ಥಲವಾಯಿತ್ತು. ಆ ಷಡುಸ್ಥಲದ ಭಾವಂಗಳೆ ಭಿನ್ನಭಾವವಾಗಿ ನಾನಾ ಸ್ಥಲಭೇದ ವ್ರತವಾಯಿತ್ತು. ಆ ವ್ರತದ ಲಕ್ಷಣವನರಿತು ಆವಾವ ಕ್ರೀಯಲ್ಲಿ ಆವಾವ ಭಾವಶುದ್ಧವಾಗಿ, ಕೃತ್ಯಕ್ಕೆ ಕಟ್ಟಳೆಯಾಗಿ, ನೇಮಕ್ಕೆ ನಿಶ್ಚಯವಾಗಿ ವ್ರತದಾಳಿಯ ತಪ್ಪದಿಪ್ಪ ಭಕ್ತನಲ್ಲಿ ಏಲೇಶ್ವರಲಿಂಗವು ನಿಶ್ಚಯವಾಗಿಪ್ಪನು.