Index   ವಚನ - 4    Search  
 
ಅರಿದೊಡೆ ಶರಣ, ಮರೆದೊಡೆ ಮಾನವ. ಪಾತಕನು, ಹೊಲೆಯನು, ನಾನೇತಕ್ಕೆ ಬಾತೇ? ಹೊತ್ತಿಂಗೊಂದೊಂದು ಪರಿಯ ಗೋಸುಂಬೆಯಂತೆ ಈಶನ ಶರಣರ ಕಂಡುದಾಸೀನವ ಮಾಡುವ ದಾಸೋಹವನರಿಯದ ದೂಷಕನು ನಾನಯ್ಯ. ಏಸು ಬುದ್ಧಿಯ ಹೇಳಿ ಬೇಸತ್ತೆನೀ ಮನಕೆ, ಈಶ ನೀ ಸಲಹಯ್ಯಾ, ಉರಿಲಿಂಗತಂದೆ.