Index   ವಚನ - 21    Search  
 
ಕಾಮನ ಕೊಂದು ಪಟ್ಟಕ್ಕೆ ನಿಂದ ಕಾಮರಾಜರಾಜನು, ರಾಜಾಧಿರಾಜನು. ಗಂಡರನೆಲ್ಲರ ಹೆಂಡಿರ ಮಾಡಿ ನೆರೆವ ವೈಶಿಕ, ಕಾಮಿನೀ ಕೇಳಾ, ಇಂತಪ್ಪ ಕಾಮಿ ಎನಗತಿ ಕಾಮಿಸಿ ನೆರೆದು ಕಾಮಸಿದ್ಧಿಯನೀವನು ಉರಿಲಿಂಗದೇವನು.