Index   ವಚನ - 44    Search  
 
ಲೋಕದಂತೆ ಬಾರರು, ಲೋಕದಂತೆ ಇರರು, ಲೋಕದಂತೆ ಹೋಗರು, ನೋಡಯ್ಯ. ಪುಣ್ಯದಂತೆ ಬಪ್ಪರು, ಜ್ಞಾನದಂತೆ ಇಪ್ಪರು, ಮುಕ್ತಿಯಂತೆ ಹೋಹರು, ನೋಡಯ್ಯಾ. ಉರಿಲಿಂಗದೇವಾ, ನಿಮ್ಮ ಶರಣರು ಉಪಮಾತೀತರಾಗಿ ಉಪಮಿಸಬಾರದು.