ವಚನ - 453     
 
ಮನದೊಳಗೆ ಘನ ವೇದ್ಯವಾಗಿ, ಘನದೊಳಗೆ ಮನ ವೇದ್ಯವಾದ ಬಳಿಕ ಸಚ್ಛಿದಾನಂದ. ಪುಣ್ಯವಿಲ್ಲ ಪಾಪವಿಲ್ಲ, ಸುಖವಿಲ್ಲ ದುಃಖವಿಲ್ಲ, ಕಾಲವಿಲ್ಲ ಕರ್ಮವಿಲ್ಲ, ಜನನವಿಲ್ಲ ಮರಣವಿಲ್ಲ. ಗುಹೇಶ್ವರಾ ನಿಮ್ಮ ಶರಣನು ಘನಮಹಿಮ ನೋಡಯ್ಯಾ.