Index   ವಚನ - 1    Search  
 
ಅಂಗ ಅನಂಗವೆಂಬೆರಡರ ಸಂದಳಿದ ಮಹಂತನ ಅಂಗ ಸೋಂಕಿತ್ತೆಲ್ಲಾ ಪವಿತ್ರ ಕಾಣಿರೇ. ಪವಿತ್ರವಿರ್ದಲ್ಲಿ ಪದಾರ್ಥವಿಹುದು, ಪದಾರ್ಥವಿರ್ದಲ್ಲಿ ಮನವಿಹುದು. ಮನವಿರ್ದಲ್ಲಿ ಹಸ್ತವಿಹುದು, ಹಸ್ತವಿರ್ದಲ್ಲಿ ಜಿಹ್ವೆಯಿಹುದು ಜಿಹ್ವೆಯಿರ್ದಲ್ಲಿ ರುಚಿಯಿಹುದು, ರುಚಿಯಿರ್ದಲ್ಲಿ ಅವಧಾನವಿಹುದು. ಅವಧಾನವಿರ್ದಲ್ಲಿ ಭಾವವಿಹುದು, ಭಾವವಿರ್ದಲ್ಲಿ ಲಿಂಗವಿಹುದು. ಲಿಂಗವಿರ್ದಲ್ಲಿ ಅರ್ಪಿತವಿಹುದು, ಅರ್ಪಿತವಿರ್ದಲ್ಲಿ ಪ್ರಸಾದವಿಹುದು. ಪ್ರಸಾದವಿರ್ದಲ್ಲಿ ಪರಿಣಾಮವಿಹುದು. ಇದು ಕಾರಣ ಮಹಾಘನ ಸದ್ಗುರು ಸಿದ್ಧಸೋಮನಾಥಾ, ನಿಮ್ಮ ಶರಣರು ಪ್ರಾಣಲಿಂಗಪ್ರವೇಶಿಗಳಾಗಿ ಪರಿಣಾಮಪ್ರಸಾದಿಗಳಯ್ಯಾ.