Index   ವಚನ - 1    Search  
 
ಅಂಗಕ್ಕೊಂದು ಸುಗುಣ ದುರ್ಗುಣ ಸೋಂಕುವಲ್ಲಿ ಸೋಂಕಿದ ಕಲೆ ಅಂಗಕ್ಕೋ ಆತ್ಮಂಗೋ? ಅಂಗಕ್ಕೆಂದಡೆ ಚೇತನವಿಲ್ಲದೆ ಒಂದನೂ ಮುಟ್ಟದಾಗಿ, ಆತ್ಮಂಗೆಂದಡೆ ಒಂದು ಲಕ್ಷ್ಯದ ಮರೆಯಲಲ್ಲದೆ ಲಕ್ಷಿಸಿಕೊಳದು. ಇಂತೀ ಕಾಯವೂ ಆ[ತ್ಮ]ವೂ ಒಡಗೂಡಿ ಅರಿವಲ್ಲಿ ಆ ಅರಿವು ಲಿಂಗವನೊಡಗೂಡಿಯಲ್ಲದೆ ಬೇರೆ ಒಡಲುವಿಡಿಯದು. ಇಂತೀ ಅಂಗ ಆತ್ಮ ಲಿಂಗಮೂರ್ತಿ ತ್ರಿವಿಧ ಸಂಗವಾದಲ್ಲದೆ ಮುಂದಣ ಅರಿವಿನ ಕುರುಹು ನಿರಿಗೆಯಾಗದು. ಆ ನಿರಿಗೆಯ ಅಂಗ ಸುಸಂಗವಾದಲ್ಲಿ ಭೋಗಬಂಕೇಶ್ವರಲಿಂಗವು ಅಂಗಸೋಂಕಿನಲ್ಲಿ ಅಡಗಿದ ತೆರ.