Index   ವಚನ - 8    Search  
 
ಮನದ ಕೈಯಿಂದರಿದು, ಬುದ್ಧಿಯ ಕೈಯಿಂದ ವಿಚಾರಿಸಿ, ಚಿತ್ತದ ಕೈಯಿಂದ ಅರ್ಪಿಸಿಕೊಂಬುದು ಜ್ಞಾತೃವೋ ಜ್ಞಾನವೋ ಜ್ಞೇಯವೋ? ಇಂತೀ ತ್ರಿವಿಧದ ಕೈಯಲ್ಲಿ ತ್ರಿವಿಧಮುಖಂಗಳಿಂದ ಅರ್ಪಿಸಿಕೊಂಬುದು ಅಂಗದ ಮೇಲಿದ್ದ ಲಿಂಗಸೋಂಕೊ? ಆ ಲಿಂಗದ ಒಳಗಣ ಕಳಾಸ್ವರೂಪೊ? ಅಲ್ಲಾ, ತನ್ನ ಅರಿದ ಅರುಹಿಸಿಕೊಂಬ ನಿರುಗೆಯ ಕುರುಹೊ? ಇಂತೀ ಅಂಗದಲ್ಲಿ, ಭಾವದಲ್ಲಿ, ಅರಿದ ಅರಿಕೆಯಲ್ಲಿ ತ್ರಿವಿಧ ಕುರುಹಳಿದು ಒಡಗೂಡಿದಲ್ಲಿ ಅಂಗಸೋಂಕು, ಅಲ್ಲಿಯೇ ನಿರಾಳ ಭೋಗಬಂಕೇಶ್ವರಲಿಂಗವಲ್ಲಿಯೇ.