Index   ವಚನ - 9    Search  
 
ಮರದೊಳಗಣ ಬೆಂಕಿ ತನ್ನ ತಾನೇ ಉರಿಯಬಲ್ಲುದೆ? ಶಿಲೆಯೊಳಗಣ ದೀಪ್ತಿ ಆ ಬೆಳಗ ತನ್ನ ತಾನೆ ಬೆಳಗಬಲ್ಲುದೆ? ಆ ತೆರನಂತೆ ಕುಟಿಲನ ಭಕ್ತಿ, ಕಿಸಕುಳನ ವಿರಕ್ತಿ ಮಥನಿಸಿಯಲ್ಲದೆ ದಿಟಹುಸಿಯ ಕಾಣಬಾರದು. ಸತ್ಯವನು ಅಸತ್ಯವನು ಪ್ರತ್ಯಕ್ಷ ಪ್ರಮಾಣಿಸಿದಲ್ಲದೆ ನಿಶ್ಚಯವನರಿಯಬಾರದು, ಗುರುವಾದಡೂ ಲಿಂಗವಾದಡೂ ಜಂಗಮವಾದಡೂ ಪರೀಕ್ಷಿಸಿ ಹಿಡಿಯದವನ ಭಕ್ತಿ, ವಿರಕ್ತಿ, ತೂತಕುಂಭದಲ್ಲಿಯ ನೀರು, ಸೂತ್ರ ತಪ್ಪಿದ ಬೊಂಬೆ, ನಿಜನೇತ್ರ ತಪ್ಪಿದ ದೃಷ್ಟಿ; ಬೇರು ಮೇಲಾದ ಸಸಿಗೆ ನೀರಿನಾರೈಕೆಯುಂಟೆ? ಇಂತು ಆವ ಕ್ರೀಯಲ್ಲಿಯೂ ಭಾವಶುದ್ಧಾತ್ಮನಾಗಿ ಆರೈಕೆ ಬೇಕು, ಭೋಗಬಂಕೇಶ್ವರಲಿಂಗದ ಸಂಗದ ಶರಣನ ಸುಖ.