Index   ವಚನ - 3    Search  
 
ಓಂಕಾರದಲ್ಲಿ ಉಗ್ಘಡಿಸುತ್ತಿರಲಾಗಿ, ಕೆಲಬಲದವರು ಓಡರಿನ್ನೆಂತೊ? ಅದು ಎನ್ನಾಜ್ಞೆಯಲ್ಲ; ಎನ್ನೊಡೆಯನ ಹಂದೆತನ. ಸುಮ್ಮನಿರ್ದಡೆ ಎನ್ನ ಕೇಡು, ಹೇಳಿದಡೆ ಒಡೆಯಂಗೆ ಹಾನಿ. ಕೂಡಲಸಂಗಮದೇವರಲ್ಲಿ ಬಸವಣ್ಣಾ ಹಿಂಗದಿರು ನಿನ್ನ ಭೃತ್ಯನೆಂದು.