Index   ವಚನ - 6    Search  
 
ಜ್ಞಾನ ಬಾ, ಮಾಯೆ ಹೋಗೆಂದು ಕಳುಹುತ್ತಿದ್ದೇನೆ. ಅರಿವು ಬಾ, ಅಜ್ಞಾನ ಹೋಗೆಂದು ಕಳುಹುತ್ತಿದ್ದೇನೆ. ನಿಃಕಲ ಬಾ, ಸಕಲ ಹೋಗೆಂದು ಕಳುಹುತ್ತಿದ್ದೇನೆ. ನಿಃಪ್ರಪಂಚ ಬಾ, ಪ್ರಪಂಚ ಹೋಗೆಂದು ಕಳುಹುತ್ತಿದ್ದೇನೆ. ಕೂಡಲಸಂಗಮದೇವರಲ್ಲಿ ಬಸವಣ್ಣನ ಬಲ್ಲವರನೊಳಗೆ ಕೂಡಿ ಅರಿಯದವರ ಹೊರಗೆ ತಡೆವುತ್ತಿದ್ದೇನೆ.