ವಚನ - 471     
 
ಜಂಗಮಸ್ಥಲಕ್ಕೆ ಲಕ್ಷಣವಾವುದೆಂದಡೆ ಹೇಳಿಹೆ ಕೇಳಿರಣ್ಣಾ: ಮೂರರ ಹೊಲಿಗೆಯ ಬಿಚ್ಚಿ ಆರ ಮಾಡಬೇಕು. ಆರರ ತಿರುಳ ತೆಗೆದು ಒಂದರೊಳಗೆ ನಿಲಿಸಬೇಕು, ಐದರ ಮುಸುಕನುಗಿದು, ಐದರ ಕಳೆಯ ಕೆಡಿಸಿ ಐದರ ನಿಲವನಡಗಿಸಿ, ಮೂರರ ಮುದ್ರೆಯನೊಡೆದು ನಾಲ್ಕರೊಳಗೆ ನಿಲ್ಲದೆ, ಮೂರು ಮುಖವು ಒಂದು ಮುಖವಾಗಿ ನಿಂದಲ್ಲದೆ ಜಂಗಮವಾಗಲರಿಯರು ಕಾಣಾ, ಈ ಭೇದವನರಿಯದೆ ಸುಳಿವರ ಕಂಡು ಬೆರಗಾದೆ ಕಾಣಾ ಗುಹೇಶ್ವರಾ.