Index   ವಚನ - 2    Search  
 
ಅಯ್ಯಾ, ಏನನಹುದೆಂಬೆ, ಏನನಲ್ಲಾ ಎಂಬೆ. ಕಾಯವುಳ್ಳನ್ನಕ್ಕ ಕರ್ಮ ಬಿಡದು, ಜೀವವುಳ್ಳನ್ನಕ್ಕ ಕಾರ್ಪಣ್ಯ ಕೆಡದು. ಆರ ಕೇಳಿ ಆರಿಗೆ ಹೇಳಿಹೆನೆಂದಡೂ ಭಾವದ ಭ್ರಮೆ ಬಿಡದು. ಮಹಾಸಮುದ್ರವನೀಜುವವನಂತೆ ಕರ ಕಾಲು ಆಡುವನ್ನಕ್ಕ ಜೀವಭ್ರಮೆ ನಿಂದಲ್ಲಿ ನಿಂದಿತ್ತು. ಭಾವಭ್ರಮೆ ಒಂದನರಿತು ಒಂದನರಿದೆಹೆನೆಂಬನ್ನಕ್ಕ ಬಂದಿತ್ತು ದಿನ, ಅಂಗವ ಹರಿವುದಕ್ಕೆ. ಈ ಸಂದೇಹದ ಸಂದಿಯಲ್ಲಿ ಕೆಡಹದೆ ನಿಜದಂಗವ ತೋರು ಗೋಪತಿನಾಥ ವಿಶ್ವೇಶ್ವರಲಿಂಗ.