Index   ವಚನ - 2    Search  
 
ಕಾಮ ಸನ್ನಿಧನಾಗಿ ತಾ ಚೆಲುವನಾದಡೆ ಕಾಮಿನೀಜನವೆಲ್ಲಾ ಮೆಚ್ಚಬೇಕು. ದಾನಗುಣದವನಾಗಿ ಕರೆದೀವನಾದಡೆ ಯಾಚಕಜನವೆಲ್ಲಾ ಮೆಚ್ಚಬೇಕು. ವೀರನಾದಡೆ ವೈರಿಗಳು ಮೆಚ್ಚಬೇಕು. ಖೂಳನಾದಡೆ ತನ್ನ ತಾ ಮೆಚ್ಚಿಕೊಂಬ. ಎನ್ನ ದೇವ ತೆಲುಗೇಶ್ವರನಲ್ಲಿ ತಾನು ಭಕ್ತನಾದಡೆ ದೇವರು ಮೆಚ್ಚಿ ಜಗವು ತಾ ಮೆಚ್ಚುವದು.