Index   ವಚನ - 8    Search  
 
ಸರ್ವಜೀವ ನಿನ್ನ ಹಾಹೆ ಎಂಬೆನೆ ? ಅದು ಭಿನ್ನಭಾವ ತ್ರಿಗುಣಾತ್ಮಕರುಂಟು, ಅದು ನಿನಗನ್ಯವೆಂಬೆನೆ ? ಆ ತ್ರಿಗುಣಾತ್ಮಕರು ನಿನ್ನ ತಿಲಾಂಶ. ಇಂತೀ ಸರ್ವಭೂತಕ್ಕೆ ನಿನ್ನ ದಯ. ಎನಗಿದೇಕೆ ಗೆಲ್ಲ ಸೋಲವೆಂಬ ಖುಲ್ಲತನ, ಎಲ್ಲ ಜೀವಕ್ಕೂ ಸರಿ. ಅರುಣೋದಯದಂತೆ ಎನ್ನ ಚಿತ್ತದಲ್ಲಿ ಸರ್ವಜೀವಕ್ಕೆ ಎಲ್ಲಕ್ಕೂ ದಯವ ಮಾಡು, ಚೆನ್ನ ದಸರೇಶ್ವರಲಿಂಗಾ.