Index   ವಚನ - 26    Search  
 
ಕಾಯದ ಗುಣವನರಿಯದೆ ಕರ್ಮಯೋಗವ ಮಾಡಬಹುದೆ? ಕರ್ಮದ ಗುಣವನರಿಯದೆ ಆತ್ಮಯೋಗವ ಮಾಡಬಹುದೆ? ಆತ್ಮನ ಗುಣವನರಿಯದೆ ವರ್ಮಯೋಗವ ಕಾಣಬಹುದೆ? ನೀರಿನಿಂದಲಾದ ಕೆಸರ ನೀರಿಂದಲೆ ತೊಳೆವಂತೆ, ಮುಳ್ಳು ಮುಳ್ಳಿನಿಂದವೆ ಕಳೆವಂತೆ, ಕರ್ಮದಿಂದ ಸತ್ಕರ್ಮ ವರ್ಮದಿಂದ ನಿಜವರ್ಮ ಸೂಜಿಯ ಮೊನೆಯ ದಾರದಂತೆ ಇದು ಲಿಂಗ ಒಡಗೂಡಿದ ಕ್ರಿಯಾಪಥಯೋಗ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.