ವಚನ - 484     
 
ಲೋಕದವರನೊಂದು ಭೂತ ಹಿಡಿದಡೆ, ಆ ಭೂತದಿಚ್ಛೆಯಲ್ಲಿ ನುಡಿವುತ್ತಿಪ್ಪರು. ಲಾಂಛನ ಧಾರಿ ವೇಷವ ಧರಿಸಿ, ಆಸೆಯಿಂದ ಘಾಸಿಯಾಗಲೇಕಯ್ಯಾ? ಆನೆಯ ಚೋಹವ ತೊಟ್ಟು ನಾಯಾಗಿ ಬೊಗಳುವ ಮಾನವರನೇನೆಂಬೆ ಗುಹೇಶ್ವರಾ?