Index   ವಚನ - 61    Search  
 
ಬರಡು ಕರೆವಾಗ ಈಯಿತ್ತೆ? ಆ ಕೊರಡು ಚಿಗುರುವಲ್ಲಿ ಹುಟ್ಟಿತ್ತೆ? ಆಗ ತೃಣ ನುಡಿವಲ್ಲಿ ಆತ್ಮ ಜೀವಿಸಿತ್ತೆ? ಆಗ ಕಾಷ್ಠವೇಷವೆದ್ದು ನಡೆವಲ್ಲಿ ಅರಿವು ಕರಿಗೊಂಡಿತ್ತೆ? ಇಂತಿವು ವಿಶ್ವಾಸದ ಹಾಹೆ. ಗುರುಚರದಲ್ಲಿ ಗುಣ, ಶಿವಲಿಂಗ ರೂಪಿನಲ್ಲಿ ಸಲ್ಲಕ್ಷಣವನರಸಿದಲ್ಲಿಯೆ ಹೋಯಿತ್ತು ಭಕ್ತಿ. ಈ ಗುಣ ತಪ್ಪದೆಂದು ಸಾರಿತ್ತು ಡಂಗುರ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.