Index   ವಚನ - 77    Search  
 
ಮೂಲಾಧಾರ ಮುಂತಾದ ಷಡಾಧಾರಂಗಳಲ್ಲಿ ಆಶ್ರಯವರ್ಣ ದಳವರ್ಣ ಭಾವವರ್ಣ ಆತ್ಮವರ್ಣ ಅಕ್ಷರವರ್ಣ ಸ್ಥಲವರ್ಣಂಗಳ ಕಲ್ಪಿಸಿ, ಭೇದಕ್ರೀಯಿಂದ ಅರಿಯಬೇಕಾಗಿ ಕ್ರೀ ಮೂರು, ಸ್ಥಲವಾರು, ತತ್ತ್ವವಿಪ್ಪತ್ತೈದು, ಕಥನ ಮೂವತ್ತಾರು, ಪ್ರಸಂಗ ನೂರೊಂದರಲ್ಲಿ ನಿರ್ವಾಹ. ಈ ಏಕವಸ್ತು ತ್ರಿಗುಣಾತ್ಮಕವಾದ ಸಂಬಂಧ. ಇಂತಿವನರಿತೆಹೆನೆಂದು ಒಂದಕ್ಕೊಂದು ಸಂದನಿಕ್ಕದೆ ಗುರುವಿನ ಕಾರುಣ್ಯವನರಿತು, ಲಿಂಗದಲ್ಲಿ ಚಿತ್ತವ ಮೂರ್ತಿಗೊಳಿಸಿ ಜಂಗಮದಲ್ಲಿ ಸತ್ವಕ್ಕೆ ತಕ್ಕ ಸಾಮರ್ಥ್ಯದಲ್ಲಿ ಭಕ್ತಿಯನೊಪ್ಪಿ ನಿಶ್ಚಯನಾಗಿಪ್ಪುದೆ ಭಕ್ತಿಯ ಅಂಗಕ್ಕೆ ಇಕ್ಕಿದ ಗೊತ್ತು ವಿಶ್ವಸ್ಥಲ ನಿರ್ವಾಹ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.