Index   ವಚನ - 81    Search  
 
ಲಿಂಗ ಸಹಿತವಾಗಿ ಸರ್ವಗುಣಂಗಳ ಭೋಗಿಸಬೇಕೆಂಬಲ್ಲಿ ಲಿಂಗಕ್ಕೆ ಕೊಟ್ಟು ತಾ ಕೊಂಬ ತೆರನಾವುದು? ಹೆಣ್ಣ ಕೊಡುವಲ್ಲಿ ತನ್ನಯ ವಿಕಾರವೊ ಲಿಂಗದ ಸುಖವೊ? ಹೊನ್ನ ಹಿಡಿವಲ್ಲಿ ತನ್ನಯ ಬಯಕೆಯೊ ಲಿಂಗದ ಭೋಗವೊ? ಮಣ್ಣ ಹಿಡಿವಲ್ಲಿ ತನ್ನಯ ಬೆಳೆಯೊ ಲಿಂಗದ ಇರವೊ? ಇಂತೀ ತ್ರಿವಿಧದ ಬಿಡುಮುಡಿಯನರಿತು, ಹೆಣ್ಣ ಬೆರಸಿದಲ್ಲಿ ಹೆಣ್ಣಿಗೆ ವಿಷಯಸುಖ ತೋರಿ ತನಗೆ ಆ ವ್ಯಾಪಾರ ಹಿಂಗಿ ನಿಂದ ನಿಜದುಳುಮೆ ಲಿಂಗಸುಖಿ. ಹೊನ್ನು ತನ್ನ ತಾ ಬಂದಲ್ಲಿ ಮುಟ್ಟಿ ಕೊಟ್ಟೆನೆಂಬುದನರಿಯದೆ ಅದು ದೃಷ್ಟದಿಂದ ಬಂದುದ, ತನ್ನಷ್ಟವೆಂಬುದನರಿದಿಪ್ಪಾತನೆ ನಿಸ್ಪೃಹ. ಮಣ್ಣ ಅಡಿವಿಡಿದು ಹಿಡಿದಲ್ಲಿ ಕರ್ಮರುಗಳಂತೆ ಕಾದರೆ ಅವು ಮುನ್ನಿನಂತೆ ಇರಲಿ ಎಂಬುದು ಪರಮ ನಿರ್ವಾಣ. ಇಂತೀ ತ್ರಿವಿಧ ಮಲಂಗಳಲ್ಲಿ ಅಮಲನಾಗಿ ಸರ್ವಗುಣ ಸಂಪನ್ನನಾದುದು ಲಿಂಗ ಭೋಗೋಪಭೋಗಿಯ ಅಂಗನಿರತ, ಸ್ವಯಾನುಭಾವಿಯ ಲಿಂಗಾಂಗ ಯೋಗ ಸಂಬಂಧ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.