Index   ವಚನ - 18    Search  
 
ಎನ್ನ ಕೈಯಲ್ಲಿ ಕೊಟ್ಟುದ ದೇವರೆಂದಿದ್ದೆ. ಇದು ಮೆಲ್ಲಮೆಲ್ಲನೆ ಕಲ್ಲಾಗಿ ಬರುತ್ತಿದೆ; ಇದ ನಾನೊಲ್ಲೆ. ಬಲ್ಲವರು ಹೇಳಿ; ಉಂಬಡೆ ಬಾಯಿಲ್ಲ, ನೋಡುವಡೆ ಕಣ್ಣಿಲ್ಲ. ಎನ್ನ ಬಡತನಕ್ಕೆ ಬೇಡುವಡೆ ಏನೂ ಇಲ್ಲ, ಆತುರವೈರಿ ಮಾರೇಶ್ವರಾ.