ವಚನ - 491     
 
ಶಬ್ದಿಯಾದಾತ ತರುಗಳ ಹೋತ, ನಿಶ್ಶಬ್ದಿಯಾದಾತ ಪಾಷಾಣವ ಹೋತ. ಕೋಪಿಯಾದಾತ ಅಗ್ನಿಯ ಹೋತ, ಶಾಂತನಾದಾತ ಜಲವ ಹೋತ. ಬಲ್ಲೆನೆಂಬಾತ ಇಲ್ಲವೆಯ ಹೋತ, ಅರಿಯೆನೆಂಬಾತ ಪಶುವ ಹೋತ. ಇದು ಕಾರಣ-ಅರಿಯೆನೆನ್ನದೆ ಬಲ್ಲೆನೆನ್ನದೆ ಅರುಹಿನ ಕುರುಹನಳಿದುಳಿದು ಗುಹೇಶ್ವರನೆಂಬ ಲಿಂಗವ ಹೋತವರನಾರನೂ ಕಾಣೆ.