ಭಕ್ತನಾಗಿ ಹುಟ್ಟಿ ಮತ್ತೊಬ್ಬರಲ್ಲಿ ಬೇಡುವುದೆ ಕಷ್ಟ.
ಹೊತ್ತು ಹೋರಿ ಭೂಮಿಯ ಅಗೆವಲ್ಲಿ
ಮೊತ್ತದ ಜೀವಂಗಳು ಸತ್ತುದ ದೃಷ್ಟವ ಕಂಡಲ್ಲಿಯೆ
ಮಾಡುವ ಮಾಟ ನಷ್ಟ.
ಇದನರಿತು ವಿರಕ್ತರಾಗಿ ಹೋದಲ್ಲಿ,
ಮತ್ತೊಬ್ಬರ ಅಪ್ಪಾ ಅಣ್ಣಾ ಎಂದು ಚಿತ್ತ ಕಲಕುವದು ಕಷ್ಟ.
ಈ ಹೊತ್ತ ದೇಹಕ್ಕೆ ನಗೆಯ ಚಿತ್ತದ ಕಾಯಕ,
ಇದನೊಪ್ಪುಗೊ,
ಆತುರವೈರಿ ಮಾರೇಶ್ವರಾ.