Index   ವಚನ - 6    Search  
 
ಕಕ್ಷೆ ಮೊದಲಾಗಿ ಅಮಳೋಕ್ಯ ಕಡೆಯಾಗಿ ಆರು ಸ್ಥಾನ ಬಾಹ್ಯವೆಂಬೆ. ನಾಸಿಕಾಗ್ರ ಭ್ರೂಮಧ್ಯ ಬ್ರಹ್ಮರಂಧ್ರ ಚೌಕಮಧ್ಯವೆಂದು ಈ ನಾಲ್ಕು ಸ್ಥಾನಗಳು ಅಭ್ಯಂತವಾಗಿಹವು. ನಾಸಿಕಾಗ್ರದ ಗುರು ಭ್ರೂಮಧ್ಯವನೆಯ್ದಿದಡೆ ಭ್ರೂಮಧ್ಯಕ್ಕೆ ಲಿಂಗವಾಯಿತ್ತು. ಭ್ರೂಮಧ್ಯದ ಲಿಂಗವನರಿತಡೆ ಬ್ರಹ್ಮರಂಧ್ರಕ್ಕೆ ಜಂಗಮವಾಯಿತ್ತು. ಇಂತೀ ತ್ರಿವಿಧದರಿವೆ ಗದ್ಗುಗೆ. ಅದಕ್ಕೆ ಶ್ರುತಿ: ``ಗುರುಲಿಂಗ ಜಂಗಮಾಖ್ಯಾತ್ಯಂ ಮಹಾಲಿಂಗ ಚತುರ್ವಿಧಂ ಯಥಾ ಚತುರ್ವಿಧಂ ಪೀಠಂ ಚಿತ್ಕಲಾ ಪರಿಪೂಜಿತಂ||'' ಇಂತೆಂಬ ಚೌಕಮಧ್ಯದಲ್ಲಿ ಮಹಾಘನವ ನೋಡುತ್ತ ನಿಬ್ಬೆರಗಾದ ನಿಜಗುಣಾ.