ವಚನ - 503     
 
ಆಗ ಹುಟ್ಟಿ ಬೇಗ ಸಾವ ಕಾಯಗೊಂಡ ಮಾನವಾ, ನೀ ದೇವರೆನಿಸಿಕೊಂಬುದೊಂದು ಆವುದಂತರ ಹೇಳಾ? ದೇವರು ಸಾವಡೆ, ದೇವರಿಗೂ ಸಾವರಿಗೂ ಆವುದಂತರ ಹೇಳಾ? ದೇವರಿಗೆ ದೇವಲೋಕ, ಮಾನವರಿಗೆ ಮರ್ತ್ಯಲೋಕ, ಗುಹೇಶ್ವರ ಅಲ್ಲಯ್ಯಂಗೆ ಇನ್ನಾವ ಲೋಕವೂ ಇಲ್ಲ.