Index   ವಚನ - 6    Search  
 
ತನ್ನ ಸಮ ಕ್ರೀವಂತರಲ್ಲಿಯಲ್ಲದೆ ಕೊಳುಕೊಡೆ ಮಿಕ್ಕಾದ ಹೊರಗಣ ಕ್ರೀ ಸೋಂಕು ಬಾಹ್ಯರಚನೆ ತಪ್ಪದಿರಬೇಕು. ಆತ್ಮನರಿದು ಮುಟ್ಟುವಲ್ಲಿ ತನ್ನ ವ್ರತದೆಸಕವನರಿದು ಸ್ವಪ್ನಾವಸ್ಥೆಗಳಲ್ಲಿದ್ದು ಸೂಕ್ಷ್ಮತನುವ ಮುಟ್ಟದೆ, ಅಲ್ಲದುದ ಕಂಡು ಮತ್ತೆ ಆರೂ ಅರಿಯರೆಂದು ತನ್ನಲ್ಲಿಯೇ ಅಡಗದೆ, ತಲೆದೋರಿದಲ್ಲಿಯೆ ಲಯವಾಗಬೇಕು. ಇಂತೀ ಗುಣ ಆತ್ಮನ ಶೀಲ ಮನಕ್ಕೆ ಮನೋಹರ ಶಂಕೇಶ್ವರ ಲಿಂಗದಲ್ಲಿ.