Index   ವಚನ - 8    Search  
 
ದ್ರವ್ಯಶೀಲ ಧನಶೀಲ ತನುಶೀಲ ಆತ್ಮಶೀಲ ಇಂತಿವರೊಳಗಾದ ನಾನಾ ಶೀಲಂಗಳೆಲ್ಲವೂ ಓಸರಿಸಿದಲ್ಲಿ ಭಾಷೆ ಹೋಯಿತ್ತು. ಕಳ್ಳನ ತಾಯ ಕಣಿಯ ಕೇಳ ಹೋದಂತೆ. ಅಲ್ಲಿಗಲ್ಲಿಗೆ ಹೋಗದೆ, ಎಲ್ಲರ ಕೂಡಿ ಎನಗೊಂದರಲ್ಲಿ ಇರೆಂದು ಕೇಳುವ ಆತ್ಮಗಳ್ಳನ ಶೀಲ ಮನಕ್ಕೆ ಮನೋಹರ ಶಂಕೇಶ್ವರ ಲಿಂಗವ ಮುಟ್ಟದೆ ಹೋಯಿತ್ತು.