ವಚನ - 509     
 
ಮಹಾಮಂಜಿನ ಸಂಗ್ರಹದ ಘಟಾಘಟಿತರವರೆಲ್ಲರು ಕುಂಜರನ ಪಂಜರದಲ್ಲಿ ಸಂಜೀವಿತರಾಗಿಪ್ಪರು! ಎಂಜಲವನುಂಡುಂಡು ಬಂದು ಅಂಜದೆ ನುಡಿವುತ್ತಿಪ್ಪರು. ರಂಜನೆಗೊಳಗಪ್ಪುದೆ ನಿರಂಜನದ ಬೆಳಗು? ಆಗರದ ಸಂಚವನರಿಯರು! ರಂಜಕನೂ ಅಲ್ಲ, ಭುಂಜಕನೂ ಅಲ್ಲ, ಗುಹೇಶ್ವರಾ ನಿಮ್ಮ ಶರಣ ಸಂಜೀವನರಹಿತನು!