Index   ವಚನ - 4    Search  
 
ಕಲ್ಲಿಲಿಟ್ಟವಂಗೊಲಿದೆ, ಕಾಲಲೊದ್ದವಂಗೊಲಿದೆ, ಬಾಯಲ್ಲಿ ಉಗಿದವಂಗೊಲಿದೆ. ಅದು ನಿನ್ನ ಭಕ್ತಿಯೋ ಸತ್ಯವೋ ಗರ್ವವೋ! ತ್ರೈಭುವನಂಗಳಿಗಭೇದ್ಯ ತಿಳಿವಡೆ ನಿನ್ನ ಮಹಿಮೆ, ಉಮೆಯ ವರ ತ್ರಿಪುರಾಂತಕಲಿಂಗವೆ.