ನಿನ್ನ ಸ್ವರೂಪ ಕಂಡೆನ್ನ ದೃಷ್ಟಿ ನಟ್ಟುದೆನಗೆ.
ನಿನ್ನ ಲಾವಣ್ಯರಸವ ಕಂಡು ಮನ ಹಾರೈಸಿತ್ತೆನಗೆ.
ನಿನ್ನ ಪ್ರವುಡಿಯಿಂದ ಕೂಡಿದೆನೆಂಬುದು ಭಾವದಲ್ಲಿ
ಬಚ್ಚಬರಿಯ ಹೆಂಗುಸಾಗಿ ತೋರಿತ್ತೆನೆಗೆ.
ಮಹಾಲಿಂಗ ತ್ರಿಪುರಾಂತಕನೆನಗೊಡ್ಡಿದ ಮಾಯೆಯ
ನಿನ್ನ ಸಮಸುಖ ಕೂಟದೊಳಿರ್ದು ಶಿವಭಾವಭಕ್ತಿಯಿಂ
ಗೆಲುವೆನು ಮಹಾ ಹೆಣ್ಣು ಎಂದು ಕೈವಿಡಿವೆನು.