ವಚನ - 511     
 
ಯುಗ ಜುಗವ ಬಲ್ಲೆನೆಂಬವರು, ನಿಚ್ಚಕ್ಕೆ ನಿಚ್ಚ ಬಪ್ಪ ಚಿಕ್ಕುಟು ಸಾವನರಿಯರು. ಬಾಯ ಬಾಗಿಲ [ಉಲುಹು], ತಲೆಹೊಲದ ಹುಲ್ಲೊಣಗಿತ್ತು. ನಿಮ್ಮನುವಿನಲ್ಲಿರ್ದೆ ಕಾಣಾ ಗುಹೇಶ್ವರಾ.