Index   ವಚನ - 18    Search  
 
ಹುಸಿಯೆಂಬ ಅಲಗಿಂಗೆ ಒಡಲೆ ಗುರಿಯಾಯಿತ್ತು ವಿಷವೆಂಬ ಅಗ್ನಿಗೆ ತನುವೆ ವಿಂಧ್ಯವಾಯಿತು. ಏನೆಂಬೆನೇನೆಂಬೆ ವಿಧಿ ಮಾಡಿತ್ತ. ಶಮೆದ ಮಾಡಿಗಳು ನೆಲೆಗೊಳ್ಳದೆ ಹೋದವು. ಮಹಾಲಿಂಗ ತ್ರಿಪುರಾಂತಕನ ಶರಣರೆ ಎನ್ನೊಡೆಯರೆಂದರಿಯದೆ ಇದ್ದ ಕಾರಣ ತೆರಹು ಮರಹಿನಲ್ಲಿ ತಾವೆಡೆಗೊಂಡವು.