ವಚನ - 512     
 
ರುದ್ರನೆಂಬಾತನೊಬ್ಬ ಗಣೇಶ್ವರನು, ಭದ್ರನೆಂಬಾತನೊಬ್ಬ ಗಣೇಶ್ವರನು. ಶಂಕರನೆಂಬಾತನೊಬ್ಬ ಗಣೇಶ್ವರನು, ಶಶಿಧರನೆಂಬಾತನೊಬ್ಬ ಗಣೇಶ್ವರನು. ಪೃಥ್ವಿಯೆ ಪೀಠ ಆಕಾಶವೆ ಲಿಂಗ- ಅಂತಹ ಆತನೊಬ್ಬ ಗಣೇಶ್ವರನು. ಬಲ್ಲಾಳನ ವಧುವ ಬೇಡಿದಾತನೊಬ್ಬ ಗಣೇಶ್ವರನು. ಸಿರಿಯಾಳನ ಮಗನ ಬೇಡಿದಾತನೊಬ್ಬ ಗಣೇಶ್ವರನು. ಬ್ರಹ್ಮಕಪಾಲ ವಿಷ್ಣುಕಂಕಾಳವನಿಕ್ಕಿ ಆಡುವಲ್ಲಿ ನೀಲಕಠನೆಂಬಾತನೊಬ್ಬ ಗಣೇಶ್ವರನು. ಇವರೆಲ್ಲರು ನಮ್ಮ ಗುಹೇಶ್ವರಲಿಂಗದೊಳಡಗಿಪ್ಪರು.