Index   ವಚನ - 11    Search  
 
ವಂದಿಸಿ ನಿಂದಿಸಿದ ಮತ್ತೆ ಅದಾರಿಂಗೆ ಕೇಡೆಂಬುದನರಿತು ತಾ ನೋಯಲೇತಕೆ? ಕಟ್ಟಿದ ತಟಾಕವನೊಡೆಯ ಕುಕ್ಕಿದ ಮತ್ತೆ ಅದರನುಭವದ ನಷ್ಟ ಅದಾರಿಗೆ ಹೇಳಾ? ಭೂಮಿಯ ಬಡತನಕ್ಕೆ ಬೀಜವಿಲ್ಲ ಪತ್ರಭಾಜನ ಹಸಿಯಿತ್ತೆಂದು ಓಗರವಿಲ್ಲ. ಮಾಟಕೂಟದಲ್ಲಿ ಇಕ್ಕಿ ಎರೆದು ಕೊಟ್ಟು ಕೊಂಡು ಚಿತ್ತ ಶುದ್ಧವಿಲ್ಲಾಯೆಂದು ನುಡಿಯಲೇತಕ್ಕೆ? ಬೆಳೆದ ಬೆಳಸ ಕಳದಲ್ಲಿ ಕಡೆಗಾಣಿಸಿದ ಮತ್ತೆ ಹೋದ ಹೊಲಬ ಬಳಸಲೇತಕ್ಕೆ ತನ್ನ ತಾನರಿದು? ಜಗ ತನಗನ್ಯವಿಲ್ಲೆಂದು ಅರಿದ ಮತ್ತೆ ಪ್ರತಿಮೂದಲೆಗೊಡಲಿಲ್ಲ. ಆತ ಉಭಯ ಶುದ್ಧಾತ್ಮನು. ತ್ರಿಗುಣರಹಿತನು, ತ್ರಿಗುಣಾತ್ಮಭರಿತನು. ಆತ ಕೂಗಿನ ದನಿಗೆ ಹೊರಗು ಮಹಾಮಹಿಮ ಮಾರೇಶ್ವರಾ.