Index   ವಚನ - 23    Search  
 
ಓಡ ಕುದುರೆಯ ಮೇಲೆ ಮಸಿಯ ಹಲ್ಲಣವ ಹಾಕಿ, ಬಸಲೆಯ ಹಂಬ ಬಾಯಿಗೆ ಕಟ್ಟಿ, ದೆಸೆವರಿವ ಅಸುರಾವುತ ಚೊಲ್ಲೆಹದ ಬಲ್ಲೆಹವ ಹಿಡಿದು, ಮುಗುಳುನಗೆಯವಳಲ್ಲಿ ಏರಿ ತಿವಿದ. ಚೊಲ್ಲೆಹದ ಬಲ್ಲೆಹ ಮುರಿದು, ಓಡಿನ ಕುದುರೆ ಒಡೆದು, ಮಸಿಯ ಹಲ್ಲಣ ನುಗ್ಗುನುಸಿಯಾಗಿ, ಬಸಲೆಯ ಬಾಯಕಟ್ಟು ಹರಿದು, ಅಸುರಾವುತ ಅವಳ ಕಿಸಲೆಯ ರಸಕ್ಕೊಳಗಾದ. ಅದೇತರಿಂದ ಹಾಗಾದನೆಂಬುದ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.