Index   ವಚನ - 28    Search  
 
ತತ್ಕಾಲವನರಿವ ಕುಕ್ಕುಟನ ಬಾಯ ತುತ್ತನಿಕ್ಕಿಸಿಕೊಂಡವನಾರಯ್ಯ? ಆ ತುತ್ತು ಮುತ್ತದವರ ಮುಕ್ತಿಯ ಬಲೆಗೀಡು ಮಾಡುವುದು. ತುತ್ತ ಮುಟ್ಟದೆ ಕುಕ್ಕುಟನ ಕುಲವ ಕರೆ. ಕರೆದಲ್ಲಿ ಬಂದು ನಿಂದುಳುಮೆ, ಅದರಂಗವ ಆರೆಂದರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.