ವಚನ - 518     
 
ಅಜ್ಞಾನಿಯಾದವಂಗೆ ಅರಿವು ತಾನೆಲ್ಲಿಯದೊ? ಸುಜ್ಞಾನಿಯಾದವಂಗೆ ಮರಹು ತಾನೆಲ್ಲಿಯದೊ? ನಾನರಿದೆನೆಂಬಾತ ಇದಿರ ಕೇಳಲುಂಟೆ? ಭ್ರಾಂತಿನ ಭ್ರಮೆಯೊಳಗೆ ಬಳಲುತ್ತಿರಲು ಮಾತಿನ ಮಾತಿನೊಳಗೆ ಅರಿವೆಂಬುದುಂಟೆ? ಸೂತಕ ಹಿಂಗದೆ ಸಂದೇಹವಳಿಯದೆ, ಮುಂದಣ ಸೂಕ್ಷ್ಮವ ಕಾಬ ಪರಿಯೆಂತೊ? ಜ್ಯೋತಿಯ ಬಸಿರೊಳಗೆ ಜನಿಸಿದ ಕಾಂತಿಯುತಪ್ರಭೆಯ ಬೆಳಗು ಗುಹೇಶ್ವರಾ ನಿಮ್ಮ ಶರಣ!