Index   ವಚನ - 42    Search  
 
ನಾಮ ಘಟ್ಟಿಸಿಯಲ್ಲದೆ ಕರೆದಡೆ ನುಡಿಯಬಾರದು. ಕ್ರೀ ಶುದ್ಧತೆಯಾಗಿ ನಿಂದಲ್ಲದೆ ಅರಿಯಬಾರದು. ಅರಿವಿಂಗೆ ಆಶ್ರಯಿಸುವುದಕ್ಕೆ ಒಡಲಿಲ್ಲ ಅರಿವು ಕುರುಹಿನಲ್ಲಿ ವಿಶ್ರಮಿಸಿ ಹಣ್ಣಿನ ಸಿಪ್ಪೆಯ ಮರೆಯಲ್ಲಿ ಭಿನ್ನರುಚಿ ನಿಂದು ಸವಿದಾಗ ಸಿಪ್ಪೆ ನಿಂದು ರಸವೊಪ್ಪಿತ್ತು. ಆ ಚಿತ್ತವ ನಿನ್ನ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.