Index   ವಚನ - 47    Search  
 
ಅಂಗ ಮಾಸಿದಲ್ಲಿ ಜಲದೊಲುಮೆ; ಮನ ಮರೆದಲ್ಲಿ ಅರಿವಿನೊಲುಮೆ; ಈ ಉಭಯವು ಮರೆದಲ್ಲಿ ಮಹಾಶರಣರ ಸಂಗದೊಲುಮೆ, ಒಲುಮೆಯ ಒಲವರವ ನಿನ್ನಿ ನೀನರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.