Index   ವಚನ - 56    Search  
 
ಜ ಎಂದಲ್ಲಿ ಜನನ ನಾಸ್ತಿಯಾಗಿ, ಗ ಎಂದಲ್ಲಿ ಗಮನ ನಾಸ್ತಿಯಾಗಿ, ಮ ಎಂದಲ್ಲಿ ಮರಣ ನಾಸ್ತಿಯಾಗಿ, ಅರಿತು ತಿರುಗುವುದು ಸ್ವಯ ಚರ ಪರವಲ್ಲದೆ, ಕೂಟಕ್ಕೆ ನೆರೆದ ಅಗುಳಾಸೆಯ ವಿಹಂಗನಂತಾಗಬೇಡ. ತ್ರಿವಿಧಾಕ್ಷರವ ತ್ರಿಗುಣದಲ್ಲಿ ಇರಿಸಿ ತ್ರಿಗುಣಕ್ಕೆ ಹೊರಗಾಗು. ತ್ರಿಗುಣರಹಿತ ಸಗುಣಭರಿತನಾಗು. ಅದ ನಿನ್ನ ನೀನರಿ, ಲಿಂಗ ಜಂಗಮವೆ ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.